ಭಾರತದ ಬ್ಯಾಂಕುಗಳಿಗೆ ಪಂಗನಾಮ ಹಾಕಿ ವಿದೇಶಕ್ಕೆ ಪರಾರಿಯಾಗಿ ನಾಪತ್ತೆಯಾಗಿರುವ ವಿಜಯ್ ಮಲ್ಯ ಇರುವ ಸ್ಥಳದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅವರು ಸಂಪರ್ಕಕ್ಕೂ ಸಿಗುತ್ತಿಲ್ಲ. ಹೀಗಾಗಿ ಮಲ್ಯ ಪರವಾಗಿ ವಾದ ಮಂಡಿಸಲು ನಾನು ಸಿದ್ದನಿಲ್ಲ ಎಂದು ವಕೀಲರು ಸುಪ್ರೀಂ ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾ. ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಹಿಮಾ ಕೋಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠದಿಂದ ವಿಜಯ್ ಮಲ್ಯ ಕುರಿತ ವಂಚನೆ ಪ್ರಕರಣದ ವಿಚಾರಣೆ ವೇಳೆ ಮಲ್ಯ ಪರ ನ್ಯಾಯವಾದಿ ಇ.ಸಿ.ಅಗರ್ವಾಲ್, “ನನಗೆ ಇರುವ ಮಾಹಿತಿ ಪ್ರಕಾರ ವಿಜಯ್ ಮಲ್ಯ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಆದರೆ ಅವರು ನನ್ನೊಂದಿಗೆ ಸದ್ಯ ಸಂಪರ್ಕದಲಿಲ್ಲ. ನನಗೆ ಅವರ ಈಮೇಲ್ ವಿಳಾಸ ಗೊತ್ತಿದೆ. ಆದರೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಭಾರತದಲ್ಲೂ ಎಲ್ಲೂ ಕಾಣಿಸಿಕೊಂಡಿಲ್ಲ. ಈಗಾಗಿ ತಮ್ಮನ್ನು ಈ ಪ್ರಕರಣದಲ್ಲಿ ವಕೀಲಿಕೆಯಿಂದ ಕೈಬಿಡಬೇಕು,’ ಎಂದು ಮನವಿ ಮಾಡಿಕೊಂಡಿದ್ದಾರೆ.ನ. 11 ರಂದು ರಾಜ್ಯದ ಮೊದಲ ವಂದೇ ಮಾತರಂ ರೈಲಿಗೆ ಮೋದಿ ಚಾಲನೆ : ಎಕ್ಸ್ ಪ್ರೆಸ್ ರೈಲಿನ ಡಿಟೇಲ್ಸ್ ಇಲ್ಲಿದೆ
ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ 10 ಸಾವಿರ ಕೋಟಿ ರೂ. ವಂಚಿಸಿದ್ದಾರೆ ಎಂಬ ಆರೋಪಕ್ಕೆ ಉದ್ಯಮಿ ವಿಜಯ ಮಲ್ಯ ಗುರಿಯಾಗಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು