May 26, 2022

Newsnap Kannada

The World at your finger tips!

sidda

ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದು ಸ್ಪಷ್ಟನೆ

Spread the love

ನಾನು ಯಾವ ಸ್ವಾಮೀಜಿಗಳಿಗೂ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕಿಡಿಕಾರಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ಈ ಕುರಿತು ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಮೌನವಾಗಿದ್ದಾರೆ, ಅವರಿಗೆ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದು ಅವರು, ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆಎಂದಿದ್ದಾರೆ

ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಮಾಜಿ ಸಿಎಂ ಬರೆದುಕೊಂಡಿದ್ದಾರೆ.

error: Content is protected !!