ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳದ ಮೇಲೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರ ಸಂಪುಟದಲ್ಲಿದ್ದ ಹಿರಿಯ ಸಚಿವ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ವಲ್ಪ ಅಸಮಧಾನಹೊಂದಿದ್ದರು. ಕೆಲವೊಮ್ಮೆ ಪರೋಕ್ಷವಾಗಿ ಅವರೇ ಇದನ್ನು ಹೊರಹಾಕಿದ್ದು ಇದೆ.
ಹೀಗಿರಬೇಕಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಭಾಗವಹಿಸುವ ಸಮಾರಂಭದಲ್ಲಿ ಶೆಟ್ಟರ್ ಇಲ್ಲದಿದ್ದರೆ ಅದಕ್ಕೆ ಬೇರೆ ವ್ಯಾಖ್ಯಾನಗಳೇ ಬರುತ್ತವೆ ಎಂಬುದಕ್ಕೆ ತಾಜಾ ಉದಾಹರಣೆಯೆಂದರೆ ಸೋಮವಾರ ಆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಇರಲಿಲ್ಲ. ಇದು ವಿಪರೀತ ಅರ್ಥ ಕಲ್ಪಿಸಬಾರದೆಂಬ ಉದ್ದೇಶದಿಂದ ಶೆಟ್ಟರ್ ಎಚ್ಚೆತ್ತುಕೊಂಡಂತೆ ಕಾಣುತ್ತೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ವರದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೊಂದಿಗೆ ಯಾವುದೇ ರೀತಿಯ ಮುನಿಸು ಇಲ್ಲ ಎಂದು ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ನಾನು ಇಲ್ಲದಿದ್ದಕ್ಕೆ ಬೇರೆ ರೀತಿ ಭಾವಿಸಬಾರದೆಂಬ ಅರ್ಥದಲ್ಲಿ ಹೇಳಿದರು. ಅಲ್ಲದೆ ನಾನು ಭಾಗವಹಿಸಲೇಬೇಕಾದ ಅನಿವಾರ್ಯತೆ ಇರಲಿಲ್ಲ. ಬೊಮ್ಮಾಯಿಯೊಂದಿಗೆ ನಾನು ಯಾವುದೇ ಅಂತರ ಕಾಯ್ದುಕೊಂಡಿಲ್ಲ ಎಂದು ತಿಳಿಸಿದರು.
ಇದಕ್ಕೆ ಉದಾಹರಣೆಯಾಗಿ, ಬೆಳಗಾವಿಯಲ್ಲಿ ಇತ್ತೀಚಿಗೆ ನಡೆದ ದಿ. ಸುರೇಶ್ ಅಂಗಡಿ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಬೊಮ್ಮಾಯಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದೆ. ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾಗ ಒಟ್ಟಿಗೆ ಇದ್ದೆವು ಎಂಬುದಾಗಿ ಹೇಳಿದರು.
More Stories
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ