ಸಿಡಿ ಬಾಂಬ್ ಬಹಿರಂಗ ಮಾಡುವ ವಿಚಾರ ಇಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಆರೋಪದ ಸುರಿಮಳೆ ಗರೆದಿದ್ದಾರೆ.
ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ನವರ ಭ್ರಷ್ಟಾಚಾರ ಸಿಡಿ ಮಾತ್ರವಲ್ಲ, ಕಣ್ಣಿನಿಂದ ನೋಡಲು ಆಗದಂತಹ ಸಿಡಿಗಳೂ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಿಡಿ ತೆಗೆದುಕೊಂಡು ನನ್ನ ಬಳಿ ಬಂದಿದ್ದರು :
ನನ್ನ ಬಳಿ ಬಂದಿದ್ದ 3 ಶಾಸಕರ ಬಳಿ ಆ ಸಿಡಿಗಳಿವೆ. ಆದರೆ ನಾನು ಅಂಥಹ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವಂತವನಲ್ಲ. ಹಾಗೆ ಮಾಡುವವನಾಗಿದ್ದರೆ ಇಂದು ನಾನು ಡಿಸಿಎಂ ಆಗುತ್ತಿದ್ದೆ ಎಂದಿದ್ದಾರೆ.
ಕಾಂಗ್ರೆಸ್ ಶಾಸಕರ ಬಳಿಯೂ ಸಿಡಿ ಇದೆ :
ಕೇವಲ ಬಿಜೆಪಿ ಶಾಸಕರ ಬಳಿ ಮಾತ್ರವಲ್ಲ ಆ ಸಿಡಿ ವಿಪಕ್ಷ ಕಾಂಗ್ರೆಸ್ ನಾಯಕರ ಬಳಿಯೂ ಇದೆ. ಡಿಕೆಶಿ, ಜಮೀರ್ ಅಹ್ಮದ್, ಜಾರ್ಜ್ ಬಳಿಯೂ ಆ ಸಿಡಿ ಇದೆ. ಸಿಡಿ ಇಟ್ಟುಕೊಂಡು ಕಾಂಗ್ರೆಸ್ ನವರು ಸಿಎಂ ಅವರಿಂದ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ. ನಾವು ಅನುದಾನ ಕೇಳಿದರೆ ವಿಷ ಕುಡಿಯಲೂ ಹಣವಿಲ್ಲ ಎನ್ನುತ್ತಾರೆ. ಆದರೆ ಕಾಂಗ್ರೆಸ್ ನಾಯಕರಿಗೆ ಅನುದಾನ ಹೇಗೆ ನೀಡುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕರಿಗೆ ನೈತಿಕತೆ ಎಂಬುದಿದ್ದರೆ ಆ ಸಿಡಿಗಳನ್ನು ಬಿಡುಗಡೆ ಮಾಡಲಿ ಎಂದು ಶಾಸಕ ಯತ್ನಾಳ್ ಸವಾಲು ಹಾಕಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ