November 22, 2024

Newsnap Kannada

The World at your finger tips!

WhatsApp Image 2023 05 26 at 2.08.28 PM

ಖ್ಯಾತ ವಿಮರ್ಶಕ ಜಿಎಚ್ ನಾಯಕ ಇನ್ನಿಲ್ಲ

Spread the love

ಮೈಸೂರು :
ಖ್ಯಾತ ವಿಮರ್ಶಕ ಜಿಎಚ್ ನಾಯಕ(88) ಶುಕ್ರವಾರ ಮೈಸೂರಿನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು.

ಪತ್ನಿ ಮೀರಾ ಹಾಗೂ ಪುತ್ರಿ ಕೀರ್ತಿ ಹಾಗೂ ಮೊಮ್ಮಗಳು ಸೇರಿದಂತೆ ಅಪಾರ ಬಂಧುಗಳು, ಅಭಿಮಾನಿಗಳು, ಸಾಹಿತ್ಯಾಸಕ್ತರನ್ನು ನಾಯಕ ಅಗಲಿದ್ದಾರೆ.

ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ವಿಮರ್ಶಕರ ಗೋವಿಂದರಾಯ ಹಮ್ಮಣ್ಣ ನಾಯಕ (ಜಿಎಚ್ ನಾಯಕ ) ೧೯೩೫ ಸೆಪ್ಟಂಬರ ೧೮ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಇವರು ಮೈಸೂರಿನಲ್ಲಿ ನೆಲೆಸಿದ್ದರು. .

ಕೃತಿಗಳು

ಸಮಕಾಲೀನ (೧೯೭೩)
ಅನಿವಾರ್ಯ (೧೯೮೦)
ನಿರಪೇಕ್ಷೆ (೧೯೮೪)
ನಿಜದನಿ (೧೯೮೮)
ವಿನಯ ವಿಮರ್ಶೆ (೧೯೯೧)
ಸಕಾಲಿಕ (೧೯೯೫)
ಗುಣ ಗೌರವ (೨೦೦೨)
ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (೨೦೦೨)
ಕೃತಿ ಸಾಕ್ಷಿ (೨೦೦೬)
ಸ್ಥಿತಿ ಪ್ರಜ್ಞೆ (೨೦೦೭)
ಮತ್ತೆ ಮತ್ತೆ ಪಂಪ (೨೦೦೮)
ಸಾಹಿತ್ಯ ಸಮೀಕ್ಷೆ (೨೦೦೯)
ಉತ್ತರಾರ್ಧ (೨೦೧೧)

ಸಂಪಾದನೆ

ಕನ್ನಡ ಸಣ್ಣಕಥೆಗಳು
ಹೊಸಗನ್ನಡ ಕವಿತೆಗಳು
ಸಂವೇದನೆ (ಅಡಿಗರ ಗೌರವ ಗ್ರಂಥ)
ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ
ಶತಮಾನದ ಕನ್ನಡ ಸಾಹಿತ್ಯ (ಸಂಪುಟ – ೧.೨)
ಆತ್ಮಕಥನ- ಬಾಳು

ಪ್ರಶಸ್ತಿಗಳು

ಉತ್ತರಾರ್ಧ ಕೃತಿಗೆ ೨೦೧೪ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ.ಪಂಪ ಪ್ರಶಸ್ತಿ, ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ ಬಹುಮಾನ’ ಲಭಿಸಿವೆ.


Copyright © All rights reserved Newsnap | Newsever by AF themes.
error: Content is protected !!