ಸರ್ಜರಿ ಮಾಡಿಸಿಕೊಳ್ಳಲೆಂದು ಹೋಗಿದ್ದ ಕಿರುತೆರೆಯ ಯುವನಟಿ ಚೇತನಾ ರಾಜ್ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸದ್ಯದಲ್ಲೇ ಸಂಬಂಧಪಟ್ಟ ವೈದ್ಯರಿಗೆ ನೋಟಿಸ್ ಜಾರಿ ಮಾಡಿವಿಚಾರಣೆಯನ್ನೂ ನಡೆಸಲಿದ್ದಾರೆ.
ಚೇತನಾ ರಾಜ್ ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಅಗತ್ಯ ಸಲಕರಣೆ ಹಾಗೂ ಪೋಷಕರ ಒಪ್ಪಿಗೆ ಇಲ್ಲದೆ ಸರ್ಜರಿಗೆ ಮುಂದಾಗಿದ್ದ ವೈದ್ಯರ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.
ಇದನ್ನು ಓದಿ :ಖಾತೆ ಬದಲಿಸಲು 55 ಸಾವಿರ ರು ಲಂಚ ಪಡೆದ PDO ಎಸಿಬಿ ಬಲೆಗೆ
ಘಟನೆ ಕುರಿತಾಗಿ ಬೆಂಗಳೂರಿನ ಸುಬ್ರಹ್ಮಣ್ಯಪುರದ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಸಂಬಂಧಪಟ್ಟ ವೈದ್ಯರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಯಲಿದ್ದಾರೆ. ಈ ಮಧ್ಯ ಮರಣೋತ್ತರ ಪರೀಕ್ಷೆ ವರದಿ ಬಳಿಕ ಅದನ್ನು ಮೆಡಿಕಲ್ ಕೌನ್ಸಿಲ್ಗೆ ಕಳಿಸಿಕೊಟ್ಟು ತನಿಖೆ ನಡೆಸಲಿದ್ದಾರೆ. ವೈದ್ಯರು ನಿರ್ಲಕ್ಷ್ಯ ವಹಿಸಿದ್ದು ಕಂಡುಬಂದರೆ ಅವರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ