ವಿವಾಹಿತ ಗ್ರಾಮಲೆಕ್ಕಿಗನ ಜೊತೆ ತಹಶೀಲ್ದಾರ್ ರಿಜಿಸ್ಟರ್ ಮದುವೆಯಾಗಿರುವ ಸಂಗತಿ ಈಗ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಹಶೀಲ್ದಾರ್ಗೆ ನೋಟಿಸ್ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ತಹಶೀಲ್ದಾರ್ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಗೀತಾ ವಿವಾಹಿತ ಗ್ರಾಮಲೆಕ್ಕಾಧಿಕಾರಿ ಶ್ರೀನಿಧಿ ಮೊದಲ ಪತ್ನಿ ಜಿಲ್ಲಾಧಿಕಾರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಡಿಸಿ ಈ ನೋಟಿಸ್ ಜಾರಿ ಮಾಡಿದ್ದಾರೆ.
ತಹಶೀಲ್ದಾರ್ ಗೀತಾ ಹಾಗೂ ಗ್ರಾಮಲೆಕ್ಕಿಗ ಶ್ರೀನಿಧಿ ಜೊತೆ 2006ರಲ್ಲಿ ದಾವಣಗೆರೆಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಶ್ರೀನಿಧಿ ಮೊದಲ ಪತ್ನಿಗೆ ವಿಚ್ಛೇದನ ನೀಡಿರಲಿಲ್ಲ.
ಜೊತೆಗೆ ಮದುವೆ ವೇಳೆ ತಹಶೀಲ್ದಾರ್ ಗೀತಾ ತಾನು ಕೂಡ ಅವಿವಾಹಿತೆ ಎಂದು ತೋರಿಸಿರುವುದಾಗಿ ಆರೋಪಿಸಿದ್ದಾರೆ.
ಗ್ರಾಮಲೆಕ್ಕಿಗನ ಮೊದಲ ಪತ್ನಿ ಜಿಲ್ಲಾಧಿಕಾರಿಗೆ ದೂರು ನೀಡಿದ ಕಾರಣಕ್ಕಾಗಿ ತಹಶೀಲ್ದಾರ್ ಗೀತಾರಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. 7 ದಿನಗಳೊಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು