ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ನೀಡಿರುವ ಸಚಿವರು ಆಗಸ್ಟ್ 10 ರಿಂದ ಸೆಪ್ಟೆಂಬರ್ 9 ರ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ 600 ರು ಪ್ರವರ್ಗ 2 ಎ,ಬಿ, 3 ಎ, ಬಿ 300 ರು ಮಾಜಿ ಸೈನಿಕರಿಗೆ 50 ರು ಶುಲ್ಕ ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಹಾಗೂ ವಿಕಲಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ.
ರೇಷ್ಮೆ ಇಲಾಖೆಯ ಯೋಜನೆಗಳನ್ನು ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿಬ್ಬಂದಿ ಕೊರತೆ ಇರುವುದು ಕಂಡು ಬಂದಿತ್ತು. ಜೊತೆಗೆ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ರೈತರು ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಕ್ಕೆ ಚಾಲನೆ ನೀಡಲಾಗಿದೆ.
ಮೊದಲ ಹಂತದಲ್ಲಿ 72 ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆ ಭರ್ತಿ ಮಾಡಿಕೊಳ್ಳಲಾಗುವುದು , ಇದರ ಜೊತೆಗೆ ಮುಂದಿನ ದಿನಗಳಲ್ಲಿ ಇಲಾಖೆಯ ವಿವಿಧ ವೃಂದದಲ್ಲಿ ಖಾಲಿ ಇರುವ 500 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ