Main News

72 ರೇಷ್ಮೆ ವಿಸ್ತಾರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಸಚಿವ ನಾರಾಯಣಗೌಡ

ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಈ ಕುರಿತಂತೆ ಪ್ರಕಟಣೆ ನೀಡಿರುವ ಸಚಿವರು ಆಗಸ್ಟ್‌ 10 ರಿಂದ ಸೆಪ್ಟೆಂಬರ್‌ 9 ರ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳಿಗೆ 600 ರು ಪ್ರವರ್ಗ 2 ಎ,ಬಿ, 3 ಎ, ಬಿ 300 ರು ಮಾಜಿ ಸೈನಿಕರಿಗೆ 50 ರು ಶುಲ್ಕ ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಹಾಗೂ ವಿಕಲಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ.

ರೇಷ್ಮೆ ಇಲಾಖೆಯ ಯೋಜನೆಗಳನ್ನು ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿಬ್ಬಂದಿ ಕೊರತೆ ಇರುವುದು ಕಂಡು ಬಂದಿತ್ತು. ಜೊತೆಗೆ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ರೈತರು ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಕ್ಕೆ ಚಾಲನೆ ನೀಡಲಾಗಿದೆ.

ಮೊದಲ ಹಂತದಲ್ಲಿ 72 ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆ ಭರ್ತಿ ಮಾಡಿಕೊಳ್ಳಲಾಗುವುದು , ಇದರ ಜೊತೆಗೆ ಮುಂದಿನ ದಿನಗಳಲ್ಲಿ ಇಲಾಖೆಯ ವಿವಿಧ ವೃಂದದಲ್ಲಿ ಖಾಲಿ ಇರುವ 500 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024