ಈ ಘಟನೆಯಲ್ಲಿ ಅರುಣ್, ಲಕ್ಷ್ಮಣ್, ಯಮನೂರು ಎಂಬುವರಿಗೆ ಗಾಯಗಳಾಗಿವೆ. ನೂಪುರ್ ಶರ್ಮಾ ಪರ-ವಿರೋಧ ವಿಚಾರವಾಗಿಯೇ ಬಾಗಲಕೋಟೆಯ ಕೇರೂರಿನಲ್ಲಿ ಗುಂಪು ಘರ್ಷಣೆ ನಡೆದಿದೆ.ಇದನ್ನು ಓದಿ –ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
ಅನ್ಯಕೋಮಿನ ವ್ಯಕ್ತಿಯೊಬ್ಬರು ನೂಪುರ್ ವಿರುದ್ಧ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಶುರುವಾದ ಜಗಳ ಕೋಮು ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ. ಅರುಣ್ ಕಟ್ಟಿಮನಿ ಸೇರಿ ಆತನ ಸ್ನೇಹಿತರು ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಅರುಣ್ ಬೆನ್ನಿಗೆ ಚೂರಿ ಹಾಕಿದ್ದಾರೆ. ತಕ್ಷಣವೇ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಕೆರೂರು ಪಟ್ಟಣದ ಬಸ್ ನಿಲ್ದಾಣದ ಮುಂದಿನ ಎರಡು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿ, ಐದು ಬೈಕ್‍ಗಳನ್ನು ಜಖಂಗೊಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ತರಕಾರಿ ಅಂಗಡಿಗಳನ್ನು ಧ್ವಂಸ ಮಾಡಿದರು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಕೆರೂರು ಪಟ್ಟಣಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇಂದು ರಾತ್ರಿ 8 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಂಗಡಿ – ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ನಾಳೆವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು