ನವದೆಹಲಿ :
ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ರಾಜೀವ್ ಕುಮಾರ್ ಮಂಗಳವಾರ ನೇಮಕವಾಗಿದ್ದಾರೆ.
ಅಶೋಕ್ ಕುಮಾರ್ ಲಾವಾಸ ಅವರು ಏಷಿಯನ್ ಡೆವಲಪ್ ಮೆಂಟ್ ಬ್ಯಾಂಕಿನ ಉಪಾಧ್ಯಕ್ಷರಾಗಿ ನೇಮಕಗೊಂಡ ತರುವಾಯ ತೆರವಾಗಿದ್ದ ಈ ಚುನಾವಣಾ ಆಯುಕ್ತರ ಸ್ಥಾನಕ್ಕೆ
ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರಾಜೀವ್ ಜಾರ್ಖಂಡ್ ಕೇಡನ 1984ರ ಐಎಎಸ್ ಬ್ಯಾಚ್ ಅಧಿಕಾರಿದ್ದಾರೆ. ರಾಜೀವ್ 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ವೇಳೆ ಮುಖ್ಯ ಚುನಾವಣಾ
ಆಯುಕ್ತರಾಗಿ ಕೆಲಸ ನಿರ್ವಹಿಸುವ ಎಲ್ಲಾ ಅವಕಾಶಗಳೂ ಇವೆ. 1960 ರಲ್ಲಿ ಜನಿಸಿರುವ ರಾಜೀವ್ 65 ವರ್ಷವಾದರೂ ಮುಖ್ಯ ಚುನಾವಣಾ ಆಯುಕ್ತರಾಗಬಹುದಾಗಿದೆ. 36
ವರ್ಷಸೇವಾ ಅವಧಿಯಲ್ಲಿ ಬಿಹಾರ್ ಮತ್ತು ಜಾರ್ಖಂಡ್ ರಾಜ್ಯಗಳೂ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ