ಅಕ್ಟೋಬರ್ನಿಂದ ಶೈಕ್ಷಣಿಕ ವರ್ಷ ಪಾಲಿಸುವಂತೆ ವಿವಿ ಕುಲಪತಿಗಳಿಗೆ ಸೂಚನೆ
ಬರುವ ಅಕ್ಟೋಬರ್ನಿಂದ 2021-22 ನೇ ವಿಶ್ವವಿದ್ಯಾಲಯ ಗಳ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಎಲ್ಲಾ ವಿವಿ ಕುಲಪತಿಗಳಿಗೆ ಶೈಕ್ಷಣಿಕ ವರ್ಷ ಪಾಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಮೊದಲ ವರ್ಷದ ಪದವಿ ಕೋರ್ಸ್ಗಳಿಗೆ ಅಕ್ಟೋಬರ್ ಮೊದಲ ವಾರದಲ್ಲಿ ದಾಖಲಾತಿ ಮಾಡಲು ಸೂಚನೆ ನೀಡಲಾಗಿದೆ. ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ನಡೆಸಿತ್ತು. ಸದ್ಯ ಈ ವರ್ಷ ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಪ್ರಕ್ರಿಯೆಯನ್ನ ಸರ್ಕಾರ ಕೈಬಿಟ್ಟಿದೆ. ನೇರವಾಗಿ ಬಿಎಸ್ಸಿ ಪದವಿಗೆ ದಾಖಲು ಪಡೆಯಬಹುದು.
ಪಿಯುಸಿ ಪಾಸಾದವರೆಲ್ಲ ಸಿಇಟಿ ಪರೀಕ್ಷೆ ಬರೆಯಬಹುದು. ಪ್ರಸಕ್ತ ವರ್ಷ ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯುವ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ