January 28, 2026

Newsnap Kannada

The World at your finger tips!

gp

ಅಕ್ಟೋಬರ್ ನಲ್ಲಿ ರಾಜ್ಯದ ಗ್ರಾಪಂಗಳಿಗೆ ಚುನಾವಣೆ ನಡೆಸಲು ಆಯೋಗ ನಿರ್ಧಾರ ?

Spread the love

ಬೆಂಗಳೂರು
ಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಈಗಕಾಲ ಕೂಡಿ ಬರುವುದು ನಿಚ್ಚಳವಾಗಿದೆ.

ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯದ ಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಎಲ್ಲಾ ಪಂಚಾಯತಿಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬದಲು ಬಹು ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ. ಚುನಾವಣಾ ಆಯೋಗಕ್ಕೆ ಅನೇಕ ಜಿಲ್ಲಾಧಿಕಾರಿಗಳು ಈ ಕುರಿತಾಗಿ ಸಲಹೆ ನೀಡಿದ್ದಾರೆ ಹೇಳಲಾಗಿದೆ

ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಮೀಸಲಾತಿ ಪಟ್ಟಿಯೂ ಕೂಡ ರೆಡಿಯಾಗಿದೆ. ಎಲ್ಲ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಮತದಾರರ ಪಟ್ಟಿಯನ್ನೂ ಸಹ ಪ್ರಕಟಿಸಿದ್ದಾರೆ.

ಮೀಸಲಾತಿ ಅಂತಿಮಗೊಂಡು, ಮತದಾರರ ಪಟ್ಟಿ ಪ್ರಕಟವಾದ 45 ದಿನಗಳ ಒಳಗೆ ಚುನಾವಣೆ ನಡೆಸಬೇಕಿರುವುದರಿಂದ ಚುನಾವಣಾ ಆಯೋಗ ಸಿದ್ಧತೆ ಕೈಗೊಂಡಿದೆ.

error: Content is protected !!