ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದಲ್ಲಿ ನಡೆದಿರುವ ಮೂರು ರೈಲುಗಳ ಅಪಘಾತದಲ್ಲಿ 275 ಮಂದಿ ಸಾವನ್ನಪ್ಪಿ, 600ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಈ ಘಟನೆಯ ಕುರಿತಂತೆ ಸಮಗ್ರ ತನಿಖೆ ನಡೆಸುವ ಸಂಬಂಧ ರೈಲ್ವೆ ಮಂಡಳಿಯಿಂದ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದೆ.
ಬಾಲಸೋರ್ ಜಿಲ್ಲೆಯ ಬಹನಾಗದ ರೈಲ್ವೆ ಅಪಘಾತ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಒಡಿಶಾ ರೈಲು ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.
ಒಡಿಶಾ ರೈಲು ಅಪಘಾತ ಪ್ರಕರಣ ಕುರಿತಂತೆ ನಾಳೆ, ನಾಡಿದ್ದು ರೈಲ್ವೆ ಸುರಕ್ಷತಾ ಆಯುಕ್ತರಿಂದ ವಿಚಾರಣೆ ಕೂಡ ನಡೆಯಲಿದೆ.
12841 ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು 12864 ಎಸ್‌ಎಂವಿಟಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಹಳಿ ತಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರು ವಿವಿಧ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ವಿಚಾರಣೆ ಮಾಡಲಿದ್ದಾರೆ.ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಈ ಮೂಲಕ ರೈಲು ಅಪಘಾತಕ್ಕೆ ಕಾರಣರಾದವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ