ಒಡಿಶಾ ರೈಲು ದುರಂತ : ಸಾವಿನ ಸಂಖ್ಯೆ 233 ಕ್ಕೆ ಏರಿಕೆ : ಮೃತರ ಕುಟುಂಬಕ್ಕೆ ಕೇಂದ್ರದಿಂದ 10 ಲಕ್ಷ ರು

Team Newsnap
1 Min Read

ಭುವನೇಶ್ವರ :

ಒಡಿಶಾದಲ್ಲಿ ಕಳೆದ ರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ, ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರದಿಂದ 10 ಲಕ್ಷ ರು ಪರಿಹಾರ :

ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ

ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು.

ಸಹಾಯವಾಣಿ ಆರಂಭ :

ನೈಋತ್ಯ ರೈಲ್ವೆ ಸ್ಥಾಪಿಸಿದ ಸಹಾಯವಾಣಿ ಸಂಖ್ಯೆಗಳು

ಬೆಂಗಳೂರು 080-22356409

ಬಂಗಾರಪೇಟೆ: 08153 255253

ಕುಪ್ಪಂ : 8431403419

SMVB : 09606005129

KJM :+91 88612 03980

Share This Article
Leave a comment