ನ. 26 ರಂದು ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಲು ಕೇಂದ್ರ ಸರ್ಕಾರದ ನಿರ್ಧಾರ

Team Newsnap
1 Min Read

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಹಿನ್ನಲೆ ಈ ಬಾರಿಯ ಸಂವಿಧಾನ ದಿನವನ್ನು ವಿಶೇಷವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.

ಈ ಹಿನ್ನಲೆ ನವೆಂಬರ್ 26 ರಂದು ಅದ್ದೂರಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ, ಸಂವಿಧಾನ ದಿನ ಆಚರಣೆ ಬಗ್ಗೆ ಮಾಹಿತಿ ನೀಡಿದರು.

ನವೆಂಬರ್ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್‍ನಲ್ಲಿ ಕಾರ್ಯಕ್ರಮ ನಡೆಯಲಿದೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನೇತೃತ್ವದಲ್ಲಿ ಇದರ ಪ್ರಚಾರವನ್ನು ಶಾಲಾ, ಕಾಲೇಜುಗಳಲ್ಲಿ ನಡೆಸಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದಲಿದ್ದಾರೆ ಮತ್ತು ಇನ್ನು ಆ್ಯಪ್‍ಗಳಲ್ಲಿ 22 ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಇರಲಿದೆ, ಅದನ್ನು ಓದಿ ವೆಬ್‍ಸೈಟ್‍ಗೆ ಅಪ್ಲೋಡ್ ಮಾಡಿ ಸರ್ಟಿಫಿಕೇಟ್ ಪಡೆಯಬಹುದಾಗಿದೆ ಎಂದರು.

Share This Article
Leave a comment