ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ರಂಪಾಟಕ್ಕೆ ಅಂತ್ಯ ಹಾಡಲು ರಾಜ್ಯ ಸರ್ಕಾರ ತಿರುವು ಕೊಟ್ಟಿದೆ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ರಾಜ್ಯ ಸರ್ಕಾರ ಅದೇಶ ಮಾಡಲಾಗಿದೆ.
ಸ್ಥಳ ನಿಯೋಜನೆ ಮಾಡದೇ ರಾಜ್ಯ ಸರ್ಕಾರವು ಡಿ.ರೂಪಾ, ಪತಿ ಐಎಎಸ್ ಮುನೀಶ್ ಮೌದ್ಗೀಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಮೂಲಕ ಇಬ್ಬರು ಮಹಿಳಾ ಅಧಿಕಾರಿಗಳ ಜಗಳದಲ್ಲಿ ಮೂವರಿಗೆ ತಲೆತಂಡ ಮಾಡಲಾಗಿದೆ.
ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಐಪಿಎಸ್ ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ನಡುವಿನ ಸಮರದ ಬಗ್ಗೆ ಬಿಸಿಬಿಸಿ ಚರ್ಚೆಯಾಗಿತ್ತು. ಅಲ್ಲದೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸಚಿವರು ಆಗ್ರಹಿಸಿದ್ದರು.
ಅಂತಿಮವಾಗಿ ಸಿಎಂ ಬೊಮ್ಮಾಯಿ ಸಿಎಸ್ ಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ಹಾಗೂ ರೂಪಗೆ ಸರ್ಕಾರ ನೋಟಿಸ್ ಜಾರಿಗೊಳಿಸಲಾಗಿದೆ.
ಇಂದು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಅವರು ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರುಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಜೊತೆಗೆ ಇಬ್ಬರೂ ಮಹಿಳಾ ಅಧಿಕಾರಿಗಳನ್ನು ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ