ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ

Team Newsnap
1 Min Read
Official invitation to President Draupadi Murmu for Dasara celebrations ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವಎಸ್.ಟಿ. ಸೋಮಶೇಖರ್ ಗುರುವಾರ ಆಹ್ವಾನ ನೀಡಿದರು.

ಸಚಿವೆ ಶಶಿಕಲಾ ಜೊಲ್ಲೆ ಸಂಸದ ಪ್ರತಾಪ್ ಸಿಂಹ ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.
ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಇದನ್ನು ಓದಿ –ನಾಳೆ ನಾವೇ ಪೇಸಿಎಂ ಪೋಸ್ಟರ್ ಅಂಟಿಸ್ತೇವೆ: ಡಿಕೆಶಿ ಪ್ರಕಟ

ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇದೇ ಪ್ರಥಮಬಾರಿಗೆ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟನೆ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

Share This Article
Leave a comment