ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್ ಪಕ್ಷ ಆದೇಶ ಹೊರಡಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಮಿತಿ ಬಳಿಕ, ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪೆನ್ ಡ್ರೈವ್ ಹಂಚಿಕೆ ಹಿಂದೆ ಕಾಂಗ್ರೆಸ್ ನ ಮಹಾನಾಯಕ, ಉಪಮುಖ್ಯಮಂತ್ರಿ ಕೈವಾಡವಿದೆ. ಪೆನ್ ಡ್ರೈವ್ ಹಂಚಿಕೆ ಮಾಡಿರುವುದು ಯಾರು ಅಂತ ಹೇಳಲಿ, ಪೆನ್ ಡ್ರೈವ್ ವಿಷಯ ಎಷ್ಟು ತಿಂಗಳ ಹಿಂದೆ ವಿಷ್ಯ ಗೊತ್ತಿತ್ತು? ಕಾಂಗ್ರೆಸ್ ಮಹಾನ್ ನಾಯಕ ದೊಡ್ಡ ಅಪರಾಧ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಎಂದೂ ಫಲಾಯಾನ ಮಾಡುವವನು ನಾನಲ್ಲ ,ಹೆಚ್.ಡಿ. ರೇವಣ್ಣ ಕುಟುಂಬದ ವಿಷ್ಯವನ್ನು ಕೆದಕಿದ್ದಾರೆ.ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ
ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ