ಮಂಗಳೂರಿಗೆ ಬರಲಿದೆ ರಷ್ಯಾದ ಅಗ್ಗದ ಕಚ್ಚಾ ತೈಲ

Team Newsnap
1 Min Read

ರಷ್ಯಾ ಭಾರೀ ಅಗ್ಗದ ಬೆಲೆಯಲ್ಲಿ ಕಚ್ಚಾ ತೈಲವನ್ನು ರಫ್ತು ಮಾಡಲು ಮುಂದಾಗಿದೆ. ಈ ಕಚ್ಚಾ ತೈಲ ಮಂಗಳೂರಿಗೆ ಬರಲಿದೆ

ಭಾರತ ಸಿಕ್ಕ ಈ ಅವಕಾಶವನ್ನು ತಕ್ಕ ಸಮಯದಲ್ಲೇ ಚೆನ್ನಾಗಿ ಸದುಪಯೋಗಪಡಿಸಿಕೊಳ್ಳುತ್ತಿದೆ.
ರಷ್ಯಾ ಭಾರೀ ರಿಯಾಯಿತಿ ಬೆಲೆಯಲ್ಲಿ ಭಾರತಕ್ಕೆ ತೈಲವನ್ನು ನೀಡುವುದಾಗಿ ಭರವಸೆ ನೀಡಿದೆ ಈಗಾಗಲೇ ಭಾರತದ ಹಲವು ಕಂಪನಿಗಳು ಈ ಒಪ್ಪಂದಕ್ಕೆ ಸಹಿ ಹಾಕಿವೆ.

ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ರಷ್ಯಾದಿಂದ ಭಾರೀ ರಿಯಾಯಿತಿ ಬೆಲೆಯಲ್ಲಿ 30 ಲಕ್ಷ ಬ್ಯಾರೆಲ್ ತೈಲವನ್ನು ಖರೀದಿಸಿದರೆ, ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಹೆಚ್‌ಪಿಸಿಎಲ್) 20 ಲಕ್ಷ ಬ್ಯಾರೆಲ್ ತೈಲ ಖರೀದಿಗೆ ಮುಂದಾಗಿದೆ. ಮಂಗಳೂರು ಮೂಲದ ಕಂಪನಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್(ಎಂಆರ್‌ಪಿಎಲ್) ಕೂಡಾ 10 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಖರೀದಿಗೆ ಮುಂದಾಗಿದೆ. 

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 140 ಡಾಲರ್‌ನಿಂದ 99 ಡಾಲರ್‌ಗೆ ಇಳಿಕೆಯಾಗಿದೆ. ಭಾರೀ ರಿಯಾಯಿತಿ ದರದಲ್ಲಿ ಸಿಗುತ್ತಿರುವ ತೈಲವನ್ನು ಖರೀದಿ ಮಾಡುತ್ತಿರುವ ಭಾರತ ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳುತ್ತಿದೆ.

Share This Article
Leave a comment