ವಿಶ್ವದ ಬಡರಾಷ್ಟ್ರ ಪಶ್ಚಿಮ ಆಫ್ರಿಕಾದ ಪುಟ್ಟ ದೇಶ ಸಿಯೆರಾ ಲಿಯೋನ್ ತೈಲ ಟ್ಯಾಂಕರ್
ಅಪಘಾದಿಂದ ಉರುಳಿ ಬಿದ್ದಾಗ
ಇಂಧನ ಸಂಗ್ರಹಿಸಲು ಜನ ಮುಗಿಬಿದ್ದ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ ಹೊತ್ತಿಕೊಂಡ ಬೆಂಕಿಗೆ ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ರೆ, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗ್ತಾನೆ ಇದೆ.
ಸಿಯೆರಾ ಲಿಯೋನ್ ದೇಶದ ರಾಜಧಾನಿ ಫ್ರೀಟೌನ್ನ ವೆಲ್ಲಿಂಗ್ಟನ್ನಲ್ಲಿ ಸಂಭವಿಸಿದ ಭೀಕರ ಸ್ಫೋಟ 108ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ.
ಅಲ್ಲದೇ 90ಕ್ಕೂ ಹೆಚ್ಚು ಮಂದಿ ಸಾವು, ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.
ಸ್ಟೇಷನ್ನಲ್ಲಿ ಇಂಧನ ಇಳಿಸಲು ಹೊರಟಿದ್ದ ಟ್ಯಾಂಕರ್ಗೆ ಗ್ರಾನೈಟ್ ತುಂಬಿದ್ದ ಟ್ರಕ್ ಡಿಕ್ಕಿಯಾಗಿದೆ.
ಟ್ರಕ್ಗೆ ಡಿಕ್ಕಿಯಾಗಿ ಟ್ಯಾಂಕರ್ನಿಂದ ಇಂಧನ ಲೀಕ್ ಆಗ್ತಿತ್ತು. ತಕ್ಷಣ ಎರಡೂ ವಾಹನದಿಂದ ಇಳಿದ ಚಾಲಕರು ಜನರಿಗೆ ಇಂಧನ ಸೋರಿಕೆ ಬಗ್ಗೆ ಎಚ್ಚರಿಕೆ ನೀಡಿದರೂ ಲೆಕ್ಕಿಸದೇ ಇಂಧನ ಸಂಗ್ರಹಿಸಲು ಜನರು ಮುಗಿಬಿದ್ದಿದ್ದಾರೆ.
ತೈಲ ಸಂಗ್ರಹಿಸಲು ಜನ ಮುಗಿಬಿದ್ದ ವೇಳೆ ಟ್ಯಾಂಕರ್ ಸ್ಫೋಟಗೊಂಡಿದೆ. ಭಾರೀ ಶಬ್ದದೊಂದಿಗೆ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲ 108 ಮಂದಿ ಸಾವನ್ನಪ್ಪಿದ್ದಾರೆ.
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ