ತಿರುಪತಿಯಲ್ಲಿ ಹಳೆಯ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ

Team Newsnap
1 Min Read

ಸತತವಾಗಿ ಭಾರಿ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿಯಲ್ಲಿನ ಅತಿದೊಡ್ಡ ಆಣೆಕಟ್ಟು ರಾಯಲ ಚೇವೂರು ಬಿರುಕು ಬಿಟ್ಟಿದೆ. ಇದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಭಾರೀ ಮಳೆಯಿಂದಾಗಿ ಆಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚಾಗಿದೆ. ಈಗ ಮಳೆ ನಿಂತಿದ್ದರೂ ಬಿರುಕುಗಳಿಂದ ನೀರು ಸೋರಿಕೆಯಾಗುತ್ತಿರುವುದು ಈಗ ಭಯಕ್ಕೆ ಕಾರಣವಾಗಿದೆ.

ಜಿಲ್ಲಾಧಿಕಾರಿ ಹರಿ ನಾರಾಯಣನ್, ಜಿಲ್ಲಾ ಪೊಲೀಸ್, ಕಂದಾಯ ಅಧಿಕಾರಿಗಳು ಹಾಗೂ ನೀರಾವರಿ ತಂಡದ ಅಧಿಕಾರಿಗಳು ತಂಡವನ್ನು ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ಜನರನ್ನು ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.

ಆಣೆಕಟ್ಟಿನಲ್ಲಿ ಬಿರುಕು ಮೂಡಿದ್ದರಿಂದ ಎಲ್ಲ ಅಮೂಲ್ಯ ಕಾಗದ ಪತ್ರಗಳು ಹಾಗೂ ಅಗತ್ಯ ವಸ್ತುಗಳೊಂದಿಗೆ ಎತ್ತರದ ಪ್ರದೇಶಕ್ಕೆ ತೆರಳಲು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಅತಿ ದೊಡ್ಡದಾದ ಹಾಗೂ ಪುರಾತನ ಆಣೆಕಟ್ಟು ಇದಾಗಿದೆ. ಇದರಿಂದಾಗಿ ಯಾವುದೇ ಅವಕಾಶವನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಆದ್ದರಿಂದ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹರಿನಾರಾಯಣ್ ಹೇಳಿದರು.

ಜಲಾಶಯದಲ್ಲಿ 0.9 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ಆಣೆಕಟ್ಟು ನೀರನ್ನು ಸಂಗ್ರಹಿಸುವಷ್ಟು ಶಕ್ತಿಯನ್ನು ಹೊಂದಿಲ್ಲ. ಹೀಗಾಗಿ ಕೆಳಭಾಗದ ಗ್ರಾಮಗಳನ್ನು ಸ್ಥಳಾಂತರಿಸುವಂತೆ ತಿಳಿಸಲಾಗಿದೆ. ಜೊತೆಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಿರುಕು ತಡೆಗೆ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ.

ಜಲಾಶಯದಲ್ಲಿ 0.9 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ಆಣೆಕಟ್ಟು ನೀರನ್ನು ಸಂಗ್ರಹಿಸುವಷ್ಟು ಶಕ್ತಿಯನ್ನು ಹೊಂದಿಲ್ಲ. ಹೀಗಾಗಿ ಕೆಳಭಾಗದ ಗ್ರಾಮಗಳನ್ನು ಸ್ಥಳಾಂತರಿಸುವಂತೆ ತಿಳಿಸಲಾಗಿದೆ.

ಜೊತೆಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಿರುಕು ತಡೆಗೆ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಲಾಗಿದೆ.

Share This Article
Leave a comment