ಒಲಿಂಪಿಕ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಕಿಯ ಸೆಮಿ ಫೈನಲ್ ಪ್ರವೇಶಿಸಿದ್ದ ಭಾರತ ಮಹಿಳಾ ತಂಡ ಫೈನಲ್ಗೇರಲು ವಿಫಲವಾಗಿದೆ.
ಅರ್ಜೇಂಟಿನಾ ವಿರುದ್ಧ ನಡೆದ ಸೆಮಿ ಫೈನಲ್ ಕದನದಲ್ಲಿ ಭಾರತ 1-2 ಗೋಲುಗಳ ಅಂತರದಿಂದ ಸೋಲು ಕಂಡಿದೆ.
ಆದರೆ, ಭಾರತಕ್ಕೆ ಕಂಚು ಗೆಲ್ಲುವ ಅವಕಾಶವಿದ್ದು, ಇನ್ನೊಂದು ಸೆಮಿ ಫೈನಲ್ನಲ್ಲಿ ಸೋಲುವ ತಂಡದ ವಿರುದ್ಧ ಪಂದ್ಯವಿದೆ.
ಇದರಲ್ಲಿ ಭಾರತ ಮಹಿಳಾ ಹಾಕಿ ತಂಡ ಗೆದ್ದರೆ ಕಂಚಿನ ಪದಕ ಮುಡಿಗೇರಿಸಿಕೊಳ್ಳಲಿದೆ.
ಪಂದ್ಯ ಆರಂಭವಾದ ಕೇವಲ ಎರಡು ನಿಮಿಷದಲ್ಲೇ ಭಾರತಕ್ಕೆ ಮೊದಲ ಗೋಲು ದಕ್ಕಿತು.
ವಂದನಾ ತಂಡಕ್ಕೆ ಖಾತೆ ತೆರೆದು ಮೊದಲ ಕ್ವಾರ್ಟರ್ನಲ್ಲಿ ಭಾರತ 1-0 ಮುನ್ನಡೆ ಸಾಧಿಸುವಂತೆ ಮಾಡಿದರು.
ಎರಡನೇ ಕ್ವಾರ್ಟರ್ನ ಆರಂಭದಲ್ಲಿ ಅರ್ಜೇಂಟಿನಾ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದುಕೊಂಡು ತನ್ನ ಖಾತೆ ತೆರೆಯಿತು.
More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ