ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಬೆಳಿಗ್ಗೆ 11:30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಸಿಎಂ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಆರ್ಟಿಕಲ್ 370 ರದ್ದತಿಯ ಬಳಿಕ ನಡೆದ ಮೊದಲ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಗೆಲುವು ಸಾಧಿಸಿದ್ದು, ಅದಕ್ಕಾಗಿ ಒಮರ್ ಅಬ್ದುಲ್ಲಾ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. 2009 ರಿಂದ 2014ರವರೆಗೆ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಮಾಣ ವಚನ ಬೋಧಿಸಲಿದ್ದಾರೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನು ಓದಿ –ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ
ಇತ್ತೀಚೆಗಿನ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ 42, ಕಾಂಗ್ರೆಸ್ 6, ಮತ್ತು ಬಿಜೆಪಿ 27 ಸ್ಥಾನಗಳನ್ನು ಪಡೆದಿವೆ.
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ