ರಾಜ್ಯದಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಹಾವಳಿ ಮುಂದುವರಿದಿದೆ. ಇಂದು ಒಂದೇ ದಿನ 12 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಕಾಣಿಸಿಕೊಂಡಿದೆ, ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ. ಮಂಗಳೂರಿನಲ್ಲಿ 27 ವರ್ಷದ ಯುವಕನಿಗೆ ಸೋಂಕು ತಗುಲಿದೆ.
ಡಿ.14ರಂದು ಬ್ರಿಟನ್‌ನಿಂದ ವಾಪಸ್ಸಾಗಿದ್ದ ಬೆಂಗಳೂರಿನ ಮಹಿಳೆಗೆ ಓಮಿಕ್ರಾನ್ ತಗುಲಿತ್ತು. ನಂತರ ಮಹಿಳೆ ಕುಟುಂಬದ ನಾಲ್ವರಿಗೂ ಸೋಂಕು ತಗುಲಿದೆ.
ರಾಜ್ಯದಲ್ಲಿ ಇದುವರೆಗೂ 31 ಮಂದಿಗೆ ಓಮಿಕ್ರಾನ್ ದೃಢವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು