ಓಮಿಕ್ರಾನ್ ವೈರಸ್ ಕಾಣಿಸಿಕೊಂಡ ಕಳೆದ ನಾಲ್ಕು ದಿನದಲ್ಲೇ ಬೆಂಗಳೂರಿನಲ್ಲಿ ಬಿಬಿಎಂಪಿ ದಂಡದ ರೂಪದಲ್ಲಿ ಲಕ್ಷಾಂತರ ರು ವಸೂಲು ಮಾಡಿದೆ.
ಮಾಸ್ಕ್ ಹಾಕದೆ ಓಡಾಡುತ್ತಿದ್ದವರಿಂದ 6,31,500ರು ಹಾಗೂ ಸಾಮಾಜಿಕ ಅಂತರ ಇಲ್ಲದೆ ಇರುವುದರಿಂದ 1,17,750 ರೂ. ದಂಡ ವಸೂಲಿ ಆಗಿದೆ.
ಕಳೆದ ನಾಲ್ಕು ದಿನದಲ್ಲಿ 2960 ಪ್ರಕರಣಗಳಲ್ಲಿ 7,49,250 ರೂ. ದಂಡ ವಸೂಲಿ ಮಾಡಿದ್ದಾರೆ. ಇದೂವರೆಗೂ 14,82,75,211 ರೂ. ದಂಡವನ್ನು ಪಾಲಿಕೆ ವಸೂಲಿ ಮಾಡಿದೆ.
ಓಮಿಕ್ರಾನ್ ತಡೆಗೆ ಮುಲಾಜಿಲ್ಲದೆ ದಂಡ ವಿಧಿಸಲು ಬಿಬಿಎಂಪಿ ಮಾರ್ಷಲ್ಸ್ ಗಳಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಇಲ್ಲದೆ, ಮಾಸ್ಕ್ ಹಾಕದೆ ಇರುವವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ 7 ಲಕ್ಷಕ್ಕೂ ಅಧಿಕ ದಂಡ ವಸೂಲಿಯಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )