ತುಮಕೂರು :
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ನಂತರ ಬಿ. ವೈ ವಿಜಯೇಂದ್ರ ಭಾನುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ಅಧಿಕಾರ ಸ್ವೀಕರಿಸುತ್ತೇನೆ ಎಂದು ತಿಳಿಸಿದರು.
ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ.
ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.ಪಕ್ಷದ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸುತ್ತೇನೆ
ಚುನಾವಣೆ ಇರೋದ್ರಿಂದ ರಾಷ್ಟ್ರೀಯ ನಾಯಕರು ಯಾರೂ ಆಗಮಿಸಲು ಆಗುತ್ತಿಲ್ಲ ವೀಕ್ಷಕರು ಬರುವ ಸಾಧ್ಯತೆ ಇದೆ ಎಂದು ಹೇಳಿದರು.
ಮಠಕ್ಕೆ ಭೇಟಿ :
ಅಧಿಕಾರ ಸ್ವೀಕಾರಕ್ಕೂ ಮುನ್ನ ಸಿದ್ದಗಂಗಾ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ.
ಹಿರಿಯ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದ್ದೇನೆ. ಯಡಿಯೂರಪ್ಪನವರೂ ಕೂಡಾ ಎಲ್ಲಾ ನಿರ್ಣಯಕ್ಕೂ ಮುನ್ನ ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆಯುತಿದ್ದರು. ನಾನು ಕೂಡಾ ರಾಜ್ಯಾಧ್ಯಕ್ಷನಾಗಿ ಅಧಿಕಾರ ಹಿಡಿಯುವ ಮುನ್ನ ಆಶೀರ್ವಾದ ಪಡೆದಿದ್ದೇನೆ.
ನ.15 ರಂದು ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಮಾರನೇ ದಿನ ನ.16ರಂದು ಬೆಂಗಳೂರಿನ ಅರಮನೆ ಮೈದಾನಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕರ್ತರ ಸಭೆ ನಡೆಯಲಿದೆ. ಪಕ್ಷದ ಎಲ್ಲಾ ಹಿರಿಯ ಮುಖಂಡರ ಯತ್ನಾಳ್ ಹಾಗೂ ಸೋಮಣ್ಣ , ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇರುತ್ತಾರೆ.
- ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
- ರೈತರ ಕ್ರಾಂತಿ ಸಂಕ್ರಾಂತಿ
- ಮಕರ ಸಂಕ್ರಾಂತಿ ಶಾಸ್ತ್ರ ರೀತ್ಯ ಆಚರಣೆ
- ಮಕರ ಸಂಕ್ರಾಂತಿ
More Stories
ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತೆರಳುತ್ತಿದ್ದ ಕಾರು ಅಪಘಾತ
ರಾಜ್ಯದಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಶ್ಚಿತ