December 22, 2024

Newsnap Kannada

The World at your finger tips!

krs dam

ಜುಲೈ 29 ರಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಸಮರ್ಪಣೆ

Spread the love

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಶ್ರೀ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ಜಿಲ್ಲಾಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮೈಸೂರು ಜಂಗಲ್ ಲಾಡ್ಜ್ ಅಧ್ಯಕ್ಷರಾದ ಸಿ.ಅನಿಲ್ ಕುಮಾರ್ ರವರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ಹೆಚ್ ವಿಶ್ವನಾಥ್, ಡಾ.ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಡಾ. ಯತೀಂದ್ರ ಎಸ್, ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ನರೇಂದ್ರಸ್ವಾಮಿ ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜುನಾಥ್, ಕೆ.ಎಂ ಉದಯ್, ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಡಿ.ರವಿಶಂಕರ್, ಜಿ.ಡಿ ಹರೀಶ್‌ಗೌಡ, ದರ್ಶನ್ ಧೃವನಾರಾಯಣ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಯೀಮ್, ಮಂಡ್ಯ ಮೈಶುಗರ್ ಕಂಪನಿಯ ಅಧ್ಯಕ್ಷರಾದ ಸಿ.ಡಿ ಗಂಗಾಧರ್, ಮೈಸೂರು ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ, ಕೆ.ಆರ್.ಎಸ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಎಸ್. ಶ್ರೀನಿವಾಸ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಮರೀಗೌಡ ಅವರು ಭಾಗವಹಿಸಲಿದ್ದಾರೆ.ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಡಾ.ಎಸ್.ಸೆಲ್ವಕುಮಾರ್, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಮೈಸೂರು ಪ್ರಾದೇಶಿಕ ಆಯಕ್ತ ಡಾ.ಜಿ.ಸಿ. ಪ್ರಕಾಶ್, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸೀಫ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!