December 19, 2024

Newsnap Kannada

The World at your finger tips!

WhatsApp Image 2024 09 23 at 5.16.41 PM

ಸೆ. 24 ರಂದು ಯುವ ಸಂಭ್ರಮ ಉದ್ಘಾಟನಾ ಸಮಾರಂಭ

Spread the love

ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರು ಘನ ಉಪಸ್ಥಿತಿ ಇರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್.ತಂಗಡಗಿ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ, ಚಾಮರಾಜನಗರ ವಿಧಾನಸಭಾ ಶಾಸಕರು ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿ. ನ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಯತಿಂದ್ರ.ಎಸ್ ಮತ್ತು ವಿವೇಕಾನಂದ.ಎಸ್ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್ ಎಂ.ಗಣೇಶ್ ಪ್ರಸಾದ್, ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಆರ್ ಮಂಜುನಾಥ್ ಅವರು ಸಮಾರಂಭದ ಅತಿಥಿಗಳಾಗಿ ಆಗಮಿಸಲಿದ್ದಾರೆ.ಇದನ್ನು ಓದಿ –ದಸರಾ ಚಲನಚಿತ್ರೋತ್ಸವ 2024- ಪೋಸ್ಟರ್ ಬಿಡುಗಡೆ

ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಅಚ್ಚು ಕಟ್ಟು ಪ್ರಾಧಿಕಾರ ಕಾವೇರಿ ಜಲಾನಯನ ಯೋಜನೆಯ ಅಧ್ಯಕ್ಷರಾದ ಮರಿಸ್ವಾಮಿಯವರು ಅತಿಥಿಗಳಾಗಿ ಭಾಗವಹಿಸಲಿದ್ದು, ಖ್ಯಾತ ಚಲನಚಿತ್ರ ನಟರಾದ ಶ್ರೀ ಮುರುಳಿ ಮತ್ತು ಖ್ಯಾತ ಚಲನಚಿತ್ರ ನಟಿಯಾದ ರುಕ್ಮಿಣಿ ವಸಂತ್ ಅವರು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!