December 24, 2024

Newsnap Kannada

The World at your finger tips!

WhatsApp Image 2022 12 04 at 9.44.13 AM

ದತ್ತ ಜಯಂತಿ ಪ್ರಯುಕ್ತ : ಡಿ.5 ರಿಂದ 9ರವರೆಗೆ ಪ್ರವಾಸಿಗರಿಗೆ ನಿಷೇಧ

Spread the love

ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.

ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದರೆ , ಜೆಡಿಎಸ್ ನಲ್ಲಿ ದಲಿತ, ಮುಸ್ಲಿಂಮರು CM ಗ್ಯಾರೆಂಟಿ – ಇಬ್ರಾಹಿಂ

ಈ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!