ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೆಂಕಟಾಚಲ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದುಕಾಲು ಲಕ್ಷ ರು ಪರಿಹಾರ ಮಂಜೂರು ಮಾಡಿದ್ದಾರೆ.
ಕೊಲಾರವಾಣಿ, ಕೋಲಾರ ಪತ್ರಿಕೆ, ಹೊನ್ನುಡಿ, ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದ
ಹಿರಿಯ ಪತ್ರಕರ್ತ ವೆಂಕಟಾಚಲ ಅವರು ಇತ್ತೀಚಿಗೆ ತೀವ್ರ ಅನಾರೋಗ್ಯ ಕಾರಣ ಆಸ್ಪತ್ರೆ ದಾಖಲಾಗಿ ಸುಮಾರು ನಾಲ್ಕು ಲಕ್ಷ ಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು.
ಈ ಬಗ್ಗೆ ಕೆಯುಡಬ್ಲ್ಯೂಜೆ ಗೆ ಮನವಿ ಸಲ್ಲಿಸಿ ನೆರವಿಗೆ ಕೋರಿದ್ದರು. ನೆರವು ಕೊಡಿಸುವಂತೆ ಕೋಲಾರ ಪತ್ರಕರ್ತರ ಸಂಘವು ಮನವಿ ಮಾಡಿತ್ತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಮಂಜೂರು ಮಾಡಿದ್ದಾರೆ.
ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆ ಸಲ್ಲಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ