One Nation, One Election : ಪರಿಶೀಲನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

Team Newsnap
1 Min Read

One Nation, One Election ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ.  

ಲೋಕಸಭೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆ ಪರಿಕಲ್ಪನೆಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.

ಒಂದೇ ಮತದಾರರ ಪಟ್ಟಿಯನ್ನು ಲೋಕಸಭಾ, ವಿಧಾನಸಭಾ ಹಾಗೂ ಇತರ ಚುನಾವಣೆ ಬಳಸಿಕೊಳ್ಳಬೇಕು. ಸರ್ಕಾರದ ದುಡ್ಡು ಅಂದರೆ ಅದು ಜನರದ್ದೇ ದುಡ್ಡು. ಎರಡು ಬಾರಿ ಚುನಾವಣೆ ಮಾಡಿ ಸಮಯ ಹಾಗೂ ಹಣವನ್ನು ಯಾಕೆ ವ್ಯರ್ಥ ಮಾಡಬೇಕು? ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು.

‘ಒಂದು ದೇಶ, ಒಂದು ಚುನಾವಣೆ’ಯ ಕಲ್ಪನೆ ಬಗ್ಗೆ ಹಿಂದೆ ಪ್ರತಿಪಾದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ‘ಈ ವ್ಯವಸ್ಥೆ ಭಾರತಕ್ಕೆ ಅಗತ್ಯವಾಗಿದೆ.ಆಗಾಗ ನಡೆಯುವ ಮತದಾನದಿಂದಾಗಿ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಹೇರುವ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು  ಪ್ರತಿಪಾದಿಸಿದ್ದರು.

ಇದೇ ವರ್ಷ ನವೆಂಬರ್-ಡಿಸೆಂಬರ್‌ ತಿಂಗಳಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಅಥವಾ ಜೂನ್‌ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಲೋಕಸಭೆ, ವಿಧಾನಸಭೆ ಹಾಗೂ ಪಂಚಾಯತಿ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯ ವಿಷಯವನ್ನೂ ಪ್ರಸ್ತಾಪಿಸಿದ್ದ ಅವರು, ಪ್ರತ್ಯೇಕ ಪಟ್ಟಿಯು ಸಂಪನ್ಮೂಲದ ವ್ಯರ್ಥ ಎಂದಿದ್ದರು.

Share This Article
Leave a comment