ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್‍ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ಎಂದಿನಂತೆ ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಪ್ರಕಟಿಸಿದರು.
ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಆನ್‍ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದು ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ