ಮದುವೆ ಸಮಾರಂಭಗಳಿಗೆ 40 ಜನರಿಗೆ ಮಾತ್ರ ಅವಕಾಶ : ಸರ್ಕಾರ ಆದೇಶ

Team Newsnap
1 Min Read

ಮದುವೆ ಸಮಾರಂಭಗಳಲ್ಲಿ ಭಾಗಿಯಾಗಲು 40 ಜನರಿಗೆ ಅವಕಾಶ ನೀಡಿ ರಾಜ್ಯ ಸರ್ಕಾರ ದಿಂದ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನರಿಗೆ ಅವಕಾಶ ಕಲ್ಪಿಸಲಾಗಿದೆ.‌ ಡೆಲ್ಟಾ ಪ್ಲಸ್ ವೈರಸ್ ಸೋಂಕಿನ ಹಿನ್ನೆಲೆ ವೈರಸ್ ಬಗ್ಗೆ ನಿಗಾ ಇಡಲು ಸರ್ಕಾರ ಸೂಚನೆ ನೀಡಿದೆ.

ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರ ಬಗ್ಗೆ ತೀವ್ರ ನಿಗಾ ಇಡುವುದು , ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನರಿಗೆ ಸೀಮಿತಗೊಳಿಸಿ ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರದಿಂದ ಜಾರಿಯಾಗಲಿದೆ.

ಮದುವೆ ಸಮಾರಂಭಕ್ಕೆ 40 ಜನರಿಗೆ ಮಾತ್ರ ಅನುಮತಿ ನೀಡಲಾಗಿದೆ. ಈಗಾಗಲೇ ಪಾಸಿಟಿವಿಟಿ ದರ ಕಡಿಮೆಗೊಂಡಿದ್ದಂತ ಅನೇಕ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ 2.0 ಮಾರ್ಗಸೂಚಿ ಕ್ರಮಗಳನ್ನು, ಇದೀಗ ಮುಂದುವರೆದು ಪಾಸಿಟಿವಿಟಿ ದರ ಕಡಿಮೆಗೊಂಡಂತ ನಾಲ್ಕು ಜಿಲ್ಲೆಗಳಲ್ಲಿಯೂ ಅನ್ ಲಾಕ್ ಮಾರ್ಗಸೂಚಿ ಕ್ರಮಗಳನ್ನು ಜಾರಿಗೊಳಿಸಿ ಆದೇಶಿಸಿದೆ.

ಕಂದಾಯ ಇಲಾಖೆಯ ಸರ್ಕಾರ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಅಧಿಸೂಚನೆ ಹೊರಡಿಸಿದ್ದಾರೆ. ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಂತ ಚಾಮರಾಜನಗರ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಕೆಟಗರಿ 1ರ ವರ್ಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೇ ಕಟೆಗರಿ 3ನೇ ವರ್ಗದಲ್ಲಿದ್ದಂತ ಮೈಸೂರು ಜಿಲ್ಲೆಯನ್ನು ಕೊರೋನಾ ಸೋಂಕಿನ ಪ್ರಕರಣಗಳ ಇಳಿಕೆಯಿಂದಾಗಿ ಕೆಟಗರಿ 2ಕ್ಕೆ ಸೇರಿಸಲಾಗಿದೆ.

Share This Article
Leave a comment