January 3, 2025

Newsnap Kannada

The World at your finger tips!

CM , DCM , Congress

ಸಿದ್ದು, ಡಿಕೆಶಿ ಜೊತೆ ಕೇವಲ 8 ಮಂದಿ ಶಾಸಕರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ

Spread the love

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಇಂದು ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಜೊತೆ 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿರುವ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದಿದೆ.

ಪ್ರಮುಖ ಖಾತೆಗಳನ್ನು ತಮ್ಮ ಆಪ್ತ ಶಾಸಕರಿಗೆ ನೀಡುವಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಬೇಡಿಕೆ ಇಟ್ಟಿದ್ದಾರೆ.

ಸಚಿವ ಸ್ಥಾನ, ಖಾತೆ ವಿಚಾರವಾಗಿ ಒಮ್ಮತ ಮೂಡಲಿಲ್ಲ. ಹೀಗಾಗಿ ಕೇವಲ 8 ಮಂದಿ ಮಾತ್ರ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವ ಟಿ.ಬಿ.ಜಯಚಂದ್ರ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗುವ ಸಾಧ್ಯತೆಯಿದೆ.

ಪ್ರಮಾಣವಚನ ಸ್ವೀಕರಿಸುವವರು ಯಾರು?:

ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ಅವರುಗಳು ಇಂದು ಸಂಪುಟ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!