ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅವಕಾಶ : ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಚನೆ

Team Newsnap
1 Min Read

ರಾಜ್ಯದ ಜನರು ಈ ಬಾರಿ ದೀಪಾವಳಿಯಲ್ಲಿ’ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ಪರಿಸರಕ್ಕೆ ಹಾನಿ ಮಾಡುವುದು ಕಂಡು ಬಂದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಸೂಚನೆ ನೀಡಿದೆ.

ಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ, ಅಗ್ನಿ ಶಾಮಕ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

ಪಟಾಕಿಯಿಂದಾಗುವ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನು ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಲಾಗಿದೆ. ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ. ಪಟಾಕಿ ಸ್ಟಾಲ್​​ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಯಶಸ್ವಿನಿ ಯೋಜನೆ’ ಮತ್ತೆ ಜಾರಿ :ನವೆಂಬರ್ 1 ರಿಂದ ನೋಂದಣಿ ಪ್ರಾರಂಭ

ಇನ್ನೂ. ಒಂದು ಹೆಜ್ಜೆ ಮುಂದೆ ಹೋಗಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸಬೇಕು.

ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ಬೆಂಗಳೂರು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.

Share This Article
Leave a comment