ಇದನ್ನು ಓದಿ –ಆಂಜನೇಯಸ್ವಾಮಿ ದೇವಾಲಯ ಧ್ವಂಸ : ವಿಗ್ರಹವನ್ನು ಕಾವೇರಿಗೆ ಎಸೆಯಲಾಗಿತ್ತು – ಪುರಾತತ್ವ ಇಲಾಖೆಯ ದಾಖಲೆಯಲ್ಲಿ ಉಲ್ಲೇಖ
ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ
ಹೀಗಂತ ಹಂದಿಗೆ ಹೋಲಿಕೆ ಮಾಡಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದೆ.
ಈ ಎರಡು ತಲೆ ಉರುಳೋದು ಖಚಿತ ಎಂದು ಮಾರಿಗುಡಿ ಎಂಬ ಪೇಜ್‌ನಲ್ಲಿ ಧಮ್ಕಿ ಕೊಡಲಾಗಿದೆ.
ಉಡುಪಿಯಲ್ಲಿ ಹಿಜಬ್ ಸಂಘರ್ಷ ನಡೆದಾಗ ಯಶ್ ಪಾಲ್, ಸಿಎಫ್‌ಐ, ವಿದ್ಯಾರ್ಥಿಗಳನ್ನು ಟೆರರಿಸ್ಟ್‌ಗಳು ಎಂದಿದ್ದರು.
ಕಾನೂನು ಹೋರಾಟದ ನೇತೃತ್ವ ವಹಿಸಿದ್ದರು. ರಾಜ್ಯದ ಧರ್ಮ ದಂಗಲ್‌ನಲ್ಲಿ ಪ್ರಮೋದ್ ಮುತಾಲಿಕ್ ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ಈ ಧಮ್ಕಿಗೆ ಕಾರಣ ಎನ್ನಲಾಗಿದೆ. ಈ ವಿಚಾರವನ್ನು ಕಾಪು ಬಿಜೆಪಿ ಯುವ ಮೋರ್ಚಾ ಲಿಖಿತ ರೂಪದಲ್ಲಿ ಪೋಲಿಸರ ಗಮನಕ್ಕೆ ತಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು