ಓಮೊಕ್ರಾನ್ ಆತಂಕದ ನಡುವೆಯೇ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ

Team Newsnap
1 Min Read

ಬೆಂಗಳೂರಿಗರಿಗೆ ಪ್ರವಾಸಿತಾಣ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟಕ್ಕೆ ಭೇಟಿ ನೀಡಲು
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅನುಮತಿ ನೀಡಿದೆ

ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದೆ . ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದರು

ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು

ಜಿಲ್ಲಾಡಳಿತ ಪ್ರವಾಸಿಗರಿಗೆ ಸಿಹಿ ಸುದ್ದಿಯೇನೋ ನೀಡಿದೆ. ಆದರೆ ಕೊರೊನಾ ಸೋಂಕಿನ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಭಯಾನಕ ಒಮಿಕ್ರಾನ್ ವೈರಸ್​ ಆತಂಕ ಕೂಡ ಇದೆ.

Share This Article
Leave a comment