ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದೆ. ಪಾಸಿಟಿವಿ ರೇಟ್ ಶೇ.1 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 100% ರಷ್ಟು ಥಿಯೇಟರ್ ಗೆ ಅವಕಾಶ ನೀಡಲಾಗುತ್ತದೆ. ಕನಿಷ್ಠ 1 ಡೋಸ್ ಹಾಕಿಸಿಕೊಂಡವರಿಗೆ ಅವಕಾಶ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರನ್ನೊಳಗೊಂಡ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಸರಾಸರಿ 0.66 ರಷ್ಟಿದೆ. ಆದ್ದರಿಂದ ಕೆಲವು ಮಾರ್ಗಸೂಚಿಗಳಲ್ಲಿ ಬದಲಾವಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಇದರಂತೆ ಶೇ.1ಕ್ಕಿಂತ ಪಾಸಿಟಿವಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ 100 ರಷ್ಟು ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಪಾಸಿಟಿವಿ ದರ 2 ರಷ್ಟು ಆದರೆ ಸಿನಿಮಾ ಮಂದಿರಗಳೇ ಸ್ಥಗಿತ ಮಾಡ್ತೇವೆ. ನೈಟ್ ಕರ್ಫ್ಯೂ 9ರ ಬದಲು ರಾತ್ರಿ 10ರಿಂದ ಇರಲಿದೆ ಎಂದು ಸ್ಪಷ್ಟಪಡಿಸಿದರು.
1 ರಿಂದ 5 ತರಗತಿ ಶಾಲೆ ಓಪನ್ ಇಲ್ಲ :
ಶಾಲೆಗಳ ಓಪನ್ ವಿಚಾರವಾಗಿ ಮಾತನಾಡಿ, 1 ರಿಂದ 5ನೇ ತರಗತಿ ಸದ್ಯಕ್ಕೆ ಓಪನ್ ಇಲ್ಲ. 6-12 ನೇ ತರಗತಿಗಳಿಗೆ 100% ಹಾಜರಾತಿಗೆ ಅನುಮತಿ ನೀಡಲಾಗುತ್ತದೆ ಎಂದರು.
ಸೋಮವಾರದಿಂದ ಶುಕ್ರವಾರ ದವರೆಗೆ ಶಾಲಾ ಕಾಲೇಜಿಗೆ ಅನುಮತಿ ನೀಡಲಾಗುತ್ತದೆ
ದೇವಸ್ಥಾನಕ್ಕೆ ಅವಕಾಶ ಸಂಬಂಧ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಜಿಲ್ಲೆಗಳಲ್ಲಿ ಅಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ಬಗ್ಗೆ ನಿರ್ಧಾರ ಮಾಡ್ತಾರೆ. ಇನ್ನು ಯಾದಗಿರಿ, ಮೈಸೂರು, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಚುರುಕು ಮಾಡಲು ಕ್ರಮಕೈಗೊಳ್ಳಲಾಗುತ್ತದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ