ಕಾವೇರಿ ನೀರು ಬಿಡುಗಡೆಗೆ ವಿರೋಧ : ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ – ಬಂಧನ

Team Newsnap
1 Min Read

ಶ್ರೀರಂಗಪಟ್ಟಣ : ತಮಿಳುನಾಡಿಗೆ ನೀರುಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಕೆ ಆರ್ ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಶನಿವಾರ ಪೊಲೀಸರು ಬಂಧಿಸಿದರು.

ಕನ್ನಡಿಗರ ರಕ್ಷಣಾ ವೇದಿಕೆ, ಕರ್ನಾಟಕ ನವ ನಿರ್ಮಾಣ ವೇದಿಕೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರುಗಳನ್ನು ಪೊಲೀಸರು ಬಂದಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ್ದ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಜಲಾಶಯದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.ವಿಧಾನ ಪರಿಷತ್ ಚುನಾವಣೆ -ಉಸ್ತುವಾರಿ ಗಳನ್ನು ನೇಮಕ ಮಾಡಿದ ಬಿಜೆಪಿ

ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಪ್ರತಿಭಟಿಸಿ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು, ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರು ನಡೆದ ಮಾತಿನ ಚಕಮಕ್ಕೆ ನಡೆಯಿತು. ಕನ್ನಡಪರ ಸಂಘಟನೆ ಹೋರಾಟಗಾರರನ್ನು ಬಲವಂತವಾಗಿ ಪೊಲೀಸರು ವಾಹನದಲ್ಲಿ ತುಂಬಿಕೊಂಡು ಹೋದರು.

Share This Article
Leave a comment