ಗ್ರಾ ಪಂ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ನಿಗದಿಗೆ ಆದೇಶ

Team Newsnap
1 Min Read

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿ ಕುರಿತು ಆದೇಶ ಹೊರಡಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗದ ನಡವಳಿಗಳ ಅನ್ವಯ ಸೂಚನೆ ನೀಡಿ ಈ ಆದೇಶ ಪ್ರಕಟಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಎಸ್. ಮುರಬಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ – ಮದ್ದೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಗಳ: ಯುವಕನ ಹತ್ಯೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 44(2)ರ ಪ್ರಕಾರ, ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗದ ಸಾಮಾನ್ಯ ಹಾಗೂ ವಿಶೇಷ ಆದೇಶಕ್ಕೆ ಒಳಪಟ್ಟು ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಬೇಕಾಗಿರುತ್ತದೆ ಎಂದು ಹೇಳಿದ್ದಾರೆ.

Share This Article
Leave a comment