40 ಕ್ಕೂ ಹೆಚ್ಚು PFI, SDPI ಕಾರ್ಯಕರ್ತರ ವಶ: ರಾಜ್ಯ ಪೊಲೀಸರಿಂದ ಶಾಕ್‌

Team Newsnap
1 Min Read
34 DySPs transferred in the state ರಾಜ್ಯದಲ್ಲಿ 34 ಮಂದಿ ಡಿವೈಎಸ್ಪಿ ವರ್ಗಾವಣೆ

ರಾಷ್ಟ್ರೀಯ ತನಿಖಾ ದಳ ಕಳೆದ ವಾರ ದಾಳಿ ನಡೆಸಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ನಾಯಕರನ್ನು ಬಂಧಿಸಿದ ಬೆನ್ನಲ್ಲೇ ಈಗ ರಾಜ್ಯಾದ್ಯಂತ ಕರ್ನಾಟಕ ಪೊಲೀಸರು ಪಿಎಫ್‌ಐ ಮತ್ತು ಎಸ್‌ಡಿಪಿಐಗೆ ಶಾಕ್‌ ನೀಡಿದ್ದಾರೆ.

ಬೀದರ್ ನಿಂದ ಚಾಮರಾಜನಗರದವರೆಗೆ ನಿನ್ನೆ ರಾತ್ರಿಯಿಂದಲೇ ದಾಳಿ ನಡೆಸಿ 40ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಮನಗರ, ಮಂಗಳೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಕೋಲಾರ, ಮೈಸೂರು, ಚಾಮರಾಜ ನಗರದಲ್ಲಿ ದಾಳಿ ನಡೆದಿದೆ. 

ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಆಯಾ ಜಿಲ್ಲೆಗಳ ಎಸ್‌ಪಿ ಹಾಗೂ ಕಮಿಷನರ್‌ಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ‘ಮೈಸೂರು ರೇಷ್ಮೆ ಸೀರೆ’ ಉಟ್ಟು ದಸರಾಗೆ ಚಾಲನೆ ಕೊಟ್ಟ ರಾಷ್ಟ್ರಪತಿ : ಬೆಲೆ ಎಷ್ಟು ಗೊತ್ತಾ ?

ವಶಕ್ಕೆ ಪಡೆದವರು ಪಿಎಫ್ಐ ಪ್ರತಿಭಟನೆ ಹಾಗೂ ಪಿಎಫ್ಐಗೆ ಸೇರಿದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿದ್ದರು. ಇದರ ಜೊತೆ ಇವರು ಭಾರೀ ಫಂಡಿಂಗ್ ಮಾಡುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಬೀದರ್‌ನಲ್ಲಿ ಪಿಎಫ್‍ಐ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಂ, ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಶೇಕ್ ಮಕ್ಸೂದ್ ವಶಕ್ಕೆ ಪಡೆಯಲಾಗಿದೆ. ಚಿತ್ರದುರ್ಗದಲ್ಲಿ ಪಿಎಫ್‍ಐ ಮುಖಂಡ ಅಫನ್ ಅಲಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Share This Article
Leave a comment