December 23, 2024

Newsnap Kannada

The World at your finger tips!

oyc

ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ – ಪ್ರಾಣಾಪಾಯದಿಂದ ಪಾರು

Spread the love

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ಜರುಗಿದೆ.

ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ.

ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ.

ನಾನು ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್ ನಲ್ಲಿ ವಿವರಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!