ಪಾಂಡವಪುರದಲ್ಲಿ ಭಾರಿ ಬೈಕ್ ರ್ಯಾಲಿ – ಪುಟ್ಟರಾಜು ಮಸೂದೆ ವಿರುದ್ದ ಕಿಡಿ

Team Newsnap
1 Min Read

ಕೇಂದ್ರ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಯನ್ನು ವಿರೋಧಿಸಿ ನಾನಾ ಸಂಘಟನೆಗಳು ಕರೆಕೊಟ್ಟಿದ್ದ ಕರ್ನಾಟಕ ಬಂದ್ ನಿಮಿತ್ತ ಸೋಮವಾರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ, ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿದರು.

ಪಟ್ಟಣದ ಐದು ದೀಪ ವೃತ್ತದಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು ಶಾಸಕ ಸಿ.ಎಸ್.ಪುಟ್ಟರಾಜು ಹಾಗೂ ಜಿಪಂ ಸದಸ್ಯ ಸಿ.ಅಶೋಕ್ ನೇತೃತ್ವದಲ್ಲಿ ಶ್ರೀರಂಗಪಟ್ಟಣ – ಜೇವರ್ಗಿ ಮುಖ್ಯ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧದ ನಡುವೆಯೂ ಸಹ ರೈತವಿರೋಧಿ ಕಾಯ್ದೆಜಾರಿಗೊಳಿಸಿರುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಕೂಗಿ ಆಕ್ರೋಶ ಹೊರಹಾಕಿದರು.

ಬಳಿಕ ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತರ ವಿರೋಧದ ನಡುವೆಯೂ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ, ಕೃಷಿ ತಿದ್ದುಪಡಿ ಸೇರಿದಂತೆ ಹಲವು ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೆ ತಂದಿವೆ. ಈ ಕಾಯ್ದೆಗಳ ವಿರುದ್ದ ಸದನದ ಒಳಗೆನಮ್ಮ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ನಡೆಸಿದವು, ಇದೀಗ ರೈತರೊಂದಿಗೆ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದೇವೆ ಎಂದು ಕಿಡಿಕಾರಿದರು.

ರೈತರು ಉಳಿದರೆ ಮಾತ್ರ ದೇಶ ಉಳಿಯುತ್ತದೆ ಆದ್ದರಿಂದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಕ್ರೋಶವ್ಯಕ್ತಪಡಿಸಿದರು.

ರೈತ ವಿರೋಧಿ ಕಾಯ್ದೆಗಳ ವಿರುದ್ದ ಹೋರಾಟ ಮಾಡುವುದು ನಮ್ಮ ಹಕ್ಕು, ರೈತ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿರುವ ಜಿಲ್ಲಾಡಳಿತ ಕ್ರಮಕ್ಕೆ ರೈತರು ಜಗ್ಗುವುದಿಲ್ಲ ಎಂದು ಕಿಡಿಕಾರಿದರು.

ಸಂದರ್ಭದಲ್ಲಿ ಜಿಪಂ ಸದಸ್ಯ ಸಿ.ಅಶೋಕ್, ಮನ್ಮುಲ್ ನಿರ್ದೇಶಕ ಕೆ.ರಾಮಚಂದ್ರು, ಜೆಡಿಎಸ್ ಅಧ್ಯಕ್ಷ ಧರ್ಮರಾಜು, ತಾಪಂ ಸದಸ್ಯರಾದ ನಿಂಗೇಗೌಡ, ಅಲ್ಪಳ್ಳಿಗೋವಿಂದಯ್ಯ, ಎಪಿಎಂಸಿ ಅಧ್ಯಕ್ಷ ಎಸ್.ಕೆ.ದೇವೇಗೌಡ, ಪುರಸಭೆ ಸದಸ್ಯರಾದ ಗಿರೀಶ್, ಬಾಬು, ಮುಖಂಡರಾದ ಹೊಸಕೋಟೆಪುಟ್ಟಣ್ಣ, ಕ್ಯಾತನಹಳ್ಳಿ ಚೇತನ್, ಬೊಮ್ಮರಾಜು, ಬಲರಾಮೇಗೌಡ, ಪಿ.ಎಲ್. ಆರ್ದಶ, ಟೌನ್ ಚಂದ್ರು,ಯೋಗಣ್ಣ, ಹರ್ಷ ಸೇರಿದಂತೆ ಹಲವರು ಹಾಜರಿದ್ದರು…

Share This Article
Leave a comment