ಕಾಬೂಲ್: ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನವು ಡಿಸೆಂಬರ್ 24ರ ರಾತ್ರಿ ಏರ್‌ಸ್ಟ್ರೈಕ್ ನಡೆಸಿದ್ದು, ಈ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದಾರೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಈ ದಾಳಿ ಲಮನ್ ಸೇರಿದಂತೆ ಏಳು ಗ್ರಾಮಗಳನ್ನು ಗುರಿಯಾಗಿಸಿಕೊಂಡು ನಡೆದಿದ್ದು, ಬರ್ಮಾಲ್‌ನ ಮುರ್ಗ್ ಬಜಾರ್ ಗ್ರಾಮ ಸಂಪೂರ್ಣ ನಾಶವಾಗಿದೆ ಎಂದು ವರದಿಗಳು ಹೇಳುತ್ತವೆ.
ತಾಲಿಬಾನ್ ರಕ್ಷಣಾ ಸಚಿವಾಲಯವು ಪಕ್ಟಿಕಾ ಮೇಲೆ ನಡೆದ ಈ ದಾಳಿಗೆ ತಕ್ಕ ಪ್ರತೀಕಾರ ತೀರಿಸುವುದಾಗಿ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದೆ. ಪಾಕಿಸ್ತಾನವು ಈ ದಾಳಿಯನ್ನು ಅಧಿಕೃತವಾಗಿ ದೃಢೀಕರಿಸದಿದ್ದರೂ, ಸೇನೆಗೆ ನಿಕಟವಾಗಿರುವ ಮೂಲಗಳು ಗಡಿಯ ಸಮೀಪವಿರುವ ತಾಲಿಬಾನ್ ಅಡಗುತಾಣಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಹೇಳಿವೆ.
ಪಾಕ್ ಆರೋಪ:
ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಸರ್ಕಾರವು ಪಾಕಿಸ್ತಾನಿ ತಾಲಿಬಾನ್ ಅಥವಾ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಉಗ್ರರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ದೂರಿಸಿದೆ. ಇತ್ತೀಚಿನ ದಿನಗಳಲ್ಲಿ ಟಿಟಿಪಿ ತನ್ನ ದಾಳಿಯನ್ನು ಪಾಕಿಸ್ತಾನಿ ಪಡೆಗಳ ಮೇಲೆ ಹೆಚ್ಚಿಸಿದೆ. ಪಾಕಿಸ್ತಾನವು ತನ್ನ ದೇಶದೊಳಗೆ ನಡೆಯುತ್ತಿರುವ ಉಗ್ರ ಕೃತ್ಯಗಳಿಗೆ ಅಫ್ಘಾನಿಸ್ತಾನ ಕಾರಣ ಎಂದು ಆರೋಪಿಸುತ್ತಿದೆ.ಇದನ್ನು ಓದಿ –ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಈ ದಾಳಿಯಿಂದಾಗಿ ಗಡಿಯಲ್ಲಿ ಉಭಯ ದೇಶಗಳ ನಡುವೆ ಮತ್ತಷ್ಟು ಉದ್ವಿಗ್ನತೆ ಉಂಟಾಗಿದೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !