ಪಾಕಿಸ್ತಾನ ಸೇನಾ ಮುಖ್ಯಸ್ಥರ ಕಾಲುಗಳಲ್ಲಿ ಗಡಗಡ ನಡುಗಿತ್ತು!

Team Newsnap
1 Min Read

ಕಳೆದ ವರ್ಷ 2019ರ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ಪಾಕ್ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಸಂಸತ್ತಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು, ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥರ ಕಾಲು ವಿಪರೀತ ಭಯದಿಂದ ನಡುಗಿ ಹೋಗಿತ್ತು ಎಂದು ಅಲ್ಲಿನ ರಾಜಕೀಯ ನಾಯಕರೊಬ್ಬರು ಹೇಳಿರುವುದು ವ್ಯಾಪಕವಾಗಿ ಸುದ್ದಿಯಾಗಿದೆ.

ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ಕೂಡಲೇ ತಮ್ಮ ದೇಶದ ಮೇಲೆ ದಾಳಿ ಮಾಡಬಹುದು. ವಿದೇಶಾಂಗ ಸಚಿವರು ಸಂಸತ್ತಿನಲ್ಲಿ ಹೇಳುತ್ತಿದ್ದಾಗ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರ ಕಾಲುಗಳು ನಡುಗುತ್ತಿದ್ದವು, ನಂತರ ಇಮ್ರಾನ್ ಖಾನ್ ಸರ್ಕಾರ ಅಭಿನಂದನ್ ಅವರ ಬಿಡುಗಡೆಗೆ ತೀರ್ಮಾನಿಸಿತ್ತು ಎಂದು ನಾಯಕರೊಬ್ಬರು ತಿಳಿಸಿದ್ದಾರೆ.

ನ್ಯಾಷನಲ್ ಅಸೆಂಬ್ಲಿಯಲ್ಲಿ ಮಾಡಿರುವ ಭಾಷಣದಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ಎನ್(ಪಿಎಂಎಲ್-ಎನ್) ನಾಯಕ ಆಯಾಝ್ ಸಾದಿಖ್, ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಪ್ರಮುಖ ಸಭೆಯೊಂದನ್ನು ಕರೆದು ಸರ್ಕಾರ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಅದೇ ದಿನ ರಾತ್ರಿ 9 ಗಂಟೆಗೆ ಭಾರತ ಪಾಕಿಸ್ತಾನ ಮೇಲೆ ದಾಳಿ ಮಾಡಬಹುದು ಎಂದು ಎಚ್ಚರಿಕೆ ನೀಡಿದ್ದರು.

ಇಮ್ರಾನ್ ಖಾನ್ ಅವರು ಭಾಗವಹಿಸಲು ನಿರಾಕರಿಸಿದ್ದ ಸಭೆಯಲ್ಲಿ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ, ದಯವಿಟ್ಟು ಅಭಿನಂದನ್ ಅವರನ್ನು ಬಿಡುಗಡೆ ಮಾಡಿ, ಇಲ್ಲದಿದ್ದರೆ ಭಾರತ ಪಾಕಿಸ್ತಾನ ಮೇಲೆ ಇಂದು ರಾತ್ರಿ 9 ಗಂಟೆಗೆ ದಾಳಿ ಮಾಡುವುದು ಖಂಡಿತ ಎಂದು ಒತ್ತಾಯಿಸಿದ್ದರು. ಆಗ ಸೇನಾ ಮುಖ್ಯಸ್ಥ ಜನರಲ್ ಬಜ್ವಾ ಅವರ ಕಾಲು ನಡುಗಿ ಹೋಗಿತ್ತು ಎಂದಿದ್ದಾರೆ.

Share This Article
Leave a comment