ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ಮಾತನಾಡಿದ ಅಮಿತ್ ಷಾ ಅವರು, ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
370ನೇ ವಿಧಿಯಡಿ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲಾಗಿದೆ. ಇದೀಗ ಅಲ್ಲಿ ಶಾಂತಿ ನೆಲೆಸಿದೆ.
ಆದರೆ ಪಿಒಕೆಯಲ್ಲಿ ಪ್ರತಿಭಟನೆಗಳು, ಕಲ್ಲು ತೂರಾಟದ ಘಟನೆಗಳು ನಡೆಯುತ್ತಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿ ವಿರೋಧಿಸುತ್ತಿರುವ ಮಮತಾ ಬ್ಯಾನರ್ಜಿ ಅವರು ಓಲೈಕೆ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಅಮಿತ್ ಷಾ ವಾಗ್ದಾಳಿ ನಡೆಸಿದ್ದಾರೆ.
ರಾಮಗಢ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದೊಂದಿಗೆ ವಿಲೀನಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನ್ನು ದೇಶದಾದ್ಯಂತ ಜಾರಿಗೆ ತರಲಾಗುವುದು ಮತ್ತು ಶ್ರೀ ಕೃಷ್ಣ ಜನ್ಮಭೂಮಿ ಹಾಗೂ ಗ್ಯಾನವ್ಯಾಪಿಯಲ್ಲಿ ದೇವಾಲಯ ನಿರ್ಮಿಸಲಾಗುವುದು ಎಂದು ಬಿಸ್ವಾ ತಿಳಿಸಿದ್ದಾರೆ.
2019ರಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದರಿಂದ ರಾಮಮಂದಿರ ನಿರ್ಮಾಣ ಹಾಗೂ 370ನೇ ವಿಧಿಯಡಿ ಕಾಶ್ಮೀರಕ್ಕೆ ಒದಗಿಸಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲಾಯಿತು ಎಂದು ಹೇಳಿದ್ದಾರೆ.ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ
ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು