ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಳೆದ 8 ವರ್ಷಗಳಿಂದ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ನವಾಯತ ಕಾಲೋನಿ ಯಲ್ಲಿ ಕಳೆದ 8 ವರ್ಷಗಳಿಂದ 3 ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯವಿದ್ದಾಳೆ. ಅಲ್ಲದೆ ಸುಳ್ಳು ದಾಖಲೆ ನೀಡಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮ ದಾಖಲೆ ಪಡೆದಿದ್ದಳು.
ಈ ಕುರಿತು ಖಚಿತ ಮಾಹಿತಿ ಕಲೆಹಾಕಿದ್ದ ಭಟ್ಕಳ ನಗರ ಪೊಲೀಸರು, ಐಪಿಸಿ ಸೆಕ್ಷನ್ 468, 471 ಅಡಿ ಪ್ರಕರಣ ದಾಖಲಿಸಿಕೊಂಡು, ಇದೀಗ ಮಹಿಳೆಯನ್ನು ಬಂಧಿಸಿದ್ದಾರೆ.
ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ, ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ನನ್ನು 8 ವರ್ಷಗಳ ಹಿಂದೆ ದುಬೈನಲ್ಲಿ ವಿವಾಹವಾಗಿದ್ದಳು.
ಈ ವೇಳೆ 2014ರಲ್ಲಿ ಪ್ರವಾಸಿ ವಿಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ ತೆರಳಿದ್ದಳು. ನಂತರ 2015ರಲ್ಲಿ ಕಳ್ಳ ಮಾರ್ಗದ ಮೂಲಕ ಭಾರತ ಪ್ರವೇಶಿಸಿ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತಕ್ಕೆ ಮರು ಪ್ರವೇಶ ಪಡೆದಿದ್ದಳು ಎಂದು ಗೊತ್ತಾಗಿದೆ.
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ