December 21, 2024

Newsnap Kannada

The World at your finger tips!

BCCI , Cricket , tournament

ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಪಾಂಡ್ಯ ನಾಯಕ – ತಂಡ ಪ್ರಕಟ

Spread the love

ಮಾರ್ಚ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ. ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯವನ್ನು ಮುನ್ನಡೆಸಲಿದ್ದಾರೆ.ರೂಪ ವಿರುದ್ಧ ಕೇಸು ದಾಖಲಿಸಲು ನಿರ್ಧಾರ – ಸಿಂಧೂರಿ: ಆಕೆಯ ಕರ್ಮಗಳು ಬಿಡುವುದಿಲ್ಲ – ಕುಸುಮಾ

ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಆಲ್ ರೌಂಡರ್ ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾಗೆ ವಾಪಸಾಗಿದ್ದಾರೆ, ಎರಡೂ ಟೆಸ್ಟ್‌ಗಳಲ್ಲಿ ಆಲ್​ರೌಂಡರ್​ ಪ್ರದರ್ಶನ ನೀಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈಗ ಏಕದಿನ ತಂಡಕ್ಕೆ ಜಡೇಜಾ ವಾಪಸಾತಿಯಿಂದ ಟೀಂ ಇಂಡಿಯಾ ಮತ್ತಷ್ಟು ಬಲ ಪಡೆಯಲಿದೆ.

world cup , india , sports

ಟೀ ಇಂಡಿಯಾ ತಂಡ :

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.

Copyright © All rights reserved Newsnap | Newsever by AF themes.
error: Content is protected !!