ಪಂಜಾಬ್​ನಲ್ಲಿ ವಿಧಾನಸಭಾ ಚುನಾವಣೆ ಮುಂದೂಡಿಕೆ – ಫೆ 20 ರಂದು – ಆಯೋಗ ನಿರ್ಧಾರ

Team Newsnap
1 Min Read

ಪಂಜಾಬ್​​ನಲ್ಲಿ ಫೆಬ್ರವರಿ 14 ರಂದು ನಡೆಯಬೇಕಾಗಿದ್ದ ಚುನಾವಣೆಯನ್ನು ಫೆಬ್ರವರಿ 20ಕ್ಕೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚೆನ್ನಿ ಹಾಗೂ ಬಿಜೆಪಿ, ಕಾಂಗ್ರೆಸ್​ ನಾಯಕರು ಮನವಿ ಮಾಡಿದ ಬೆನ್ನಲ್ಲೇ ಚುನಾವಣಾ ಆಯೋಗ ಈ ನಿರ್ಧಾರವನ್ನು ಪ್ರಕಟಿಸಿದೆ.

ಈ ಸಂಬಂಧ ಇಂದು ಮಹತ್ವದ ಸಭೆ ನಡೆಸಿದ ದೆಹಲಿ ಚುನಾವಣಾ ಆಯೋಗ ಫೆಬ್ರವರಿ 14ಕ್ಕೆ ನಡೆಯಬೇಕಾಗಿದ್ದ ಚುನಾವಣೆಯನ್ನು ಫೆಬ್ರವರಿ 20ಕ್ಕೆ ನಡೆಸುವುದಾಗಿ ತಿಳಿಸಿದೆ.

ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯನ್ನು 7 ಹಂತಗಳಲ್ಲಿ ನಡೆಸುವುದಾಗಿ ಆಯೋಗ ಘೋಷಿಸಿತ್ತು.

ಆ ಪ್ರಕಾರ ಎರಡನೇ ಹಂತದ ಮತದಾನದ ಭಾಗವಾಗಿ ಪಂಜಾಬ್​ನಲ್ಲಿ ಫೆಬ್ರವರಿ 20ಕ್ಕೆ ಮತದಾನ ನಡೆಯಲಿದೆ.

ಮುಂದಿನ ತಿಂಗಳು ಅಂದರೆ ಫೆಬ್ರವರಿ 14 ರಂದು ಪಂಜಾಬ್​ನಲ್ಲಿ ವಿಧಾನಸಭೆ ಎಲೆಕ್ಷನ್​ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು.

ಆದರೆ ಇದಕ್ಕೆ ನಕಾರವೆತ್ತಿದ್ದ ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಚೆನ್ನಿ , ಸಂತ ಗುರು ರವಿದಾಸ್ ಜಯಂತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು. ಈ ಜಯಂತಿ ಹಿನ್ನೆಲೆಯಲ್ಲಿ ರಾಜ್ಯದ ಹೆಚ್ಚಿನ ದಲಿತ ಬಾಂಧವರು ಕಾಶಿ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ಇರುವುದಿಲ್ಲ. ಹೀಗಾಗಿ ಚುನಾವಣೆಯನ್ನು ಮುಂದೂಡುವುದು ಸೂಕ್ತ ಎಂದು ಮನವಿ ಮಾಡಿದ್ದರು.

Share This Article
Leave a comment